ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ‘ಶಕ್ತಿ ಯೋಜನೆ’ಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ರೆ ಕಾರ್ಡ್ಸ್​​ಗೆ ದಾಖಲಾಗಿ ಇತಿಹಾಸ ನಿರ್ಮಿಸಿದೆ.

ರಕ್ಷಾ ಬಂಧನ ಸಮಯದಲ್ಲಿ ಬಂದ “Golden Book Of Record” ಎಲ್ಲ ಕನ್ನಡಿಗ ಮಹಿಳೆಯರಿಗೆ ಸಂದ ಗೌರವ ಆಗಿದೆ. ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದು ಇಲಾಖೆಗೆ ಅಭಿನಂದನೆ ತಿಳಿಸಿದ್ದಾರೆ.

ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರೆಂಟಿ: ಸಾರಿಗೆ ಹಾಗೂ‌ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ‘ಶಕ್ತಿ ಯೋಜನೆ “Golden Book Of Record” ​​ಗೆ ದಾಖಲಾಗಿರುವ ಕುರಿತಂತೆ ಪ್ರತಿಕ್ರಿಯಿಸಿದ್ದು ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ Golden Book of World Recordsನಲ್ಲಿ ದಾಖಲು- ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣ ಆಗಿದೆ ಎಂದಿದ್ದಾರೆ.

500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ( ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

ಈ ಎರಡು ವರುಷಗಳ‌ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌ 5800 ಹೊಸ ಬಸ್ಸುಗಳ ಸೇರ್ಪಡೆ,10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ.

Beyond Free Rides- ಎಂಬ ಹೆಸರಿನಲ್ಲಿ Sustainable Mobility Network ರವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ – ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *