ಬೆಂಗಳೂರು: ರಾಜ್ಯ ಸರ್ಕಾರವು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಜನಜೀವನದಲ್ಲಿ ಅಳವಡಿಸಿಕೊಂಡು ಸೇವೆ ಸಲ್ಲಿಸಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗೌರವಿಸುವ ನಿಟ್ಟಿನಲ್ಲಿ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ವನ್ನು ನೀಡುತ್ತಿದೆ. ಈ ಪ್ರಶಸ್ತಿ ಐದು ಲಕ್ಷ ರೂಪಾಯಿ ನಗದು ಹಾಗೂ ಗೌರವ ಪತ್ರವನ್ನು ಒಳಗೊಂಡಿದೆ. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆಗಾಗಿ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹತಾ ಮಾನದಂಡ
- ವೈಯಕ್ತಿಕ ಅರ್ಜಿ: ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಮಾರ್ಗದರ್ಶನದಂತೆ ಬದುಕಿ ಕನಿಷ್ಠ 60 ವರ್ಷಗಳನ್ನು ಪೂರೈಸಿರುವ ವ್ಯಕ್ತಿಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
- ಸಂಘ/ಸಂಸ್ಥೆಗಳ ಅರ್ಜಿ: ಕನಿಷ್ಠ 25 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿರುವ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಹವಾಗಿವೆ.
ಪ್ರಶಸ್ತಿ ನೀಡುವ ಉದ್ದೇಶ
ಮಹಾತ್ಮ ಗಾಂಧೀಜಿಯವರ ಜನಪರ ಕಾರ್ಯಕ್ರಮಗಳು ಮತ್ತು ತತ್ವಗಳನ್ನು ಜೀವಂತವಾಗಿಡುವ ನಿಟ್ಟಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ವಿಶೇಷವಾಗಿ ಕೆಳಗಿನ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಪರಿಗಣಿಸಲಾಗುತ್ತದೆ:
- ಅಸ್ಪೃಶ್ಯತೆ ನಿವಾರಣೆ
- ಅಹಿಂಸಾ ಪ್ರಚಾರ
- ಮಹಿಳಾ ಸಬಲೀಕರಣ
- ಗ್ರಾಮೀಣ ನೈರ್ಮಲ್ಯ
- ಮದ್ಯಪಾನ ವಿರೋಧಿ ಚಳುವಳಿ
- ಖಾದಿ ಹಾಗೂ ಸ್ವದೇಶಿ ವಸ್ತುಗಳ ಬಳಕೆ ಉತ್ತೇಜನ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ
ಅರ್ಜಿ ಸಲ್ಲಿಕೆ ವಿಧಾನ
ಅರ್ಜಿ ಸಲ್ಲಿಸಲು ಆಸಕ್ತ ವ್ಯಕ್ತಿಗಳು ಅಥವಾ ಸಂಸ್ಥೆಗಳು ನೇರವಾಗಿ ಅರ್ಜಿ ಸಲ್ಲಿಸಬಹುದಾದಂತೆ, ತೃತೀಯ ವ್ಯಕ್ತಿಗಳಿಂದ ಶಿಫಾರಸ್ಸುಗಳನ್ನು ಸಹ ಸಲ್ಲಿಸಬಹುದು.
ಅರ್ಜಿಗಳನ್ನು ಸೆಪ್ಟೆಂಬರ್ 19, 2025ರೊಳಗಾಗಿ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
ಆಯುಕ್ತರು,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ವಾರ್ತಾ ಸೌಧ, ನಂ. 17,
ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ),
ಬೆಂಗಳೂರು – 560 001.
ಅಲ್ಲದೆ, ಅರ್ಜಿಗಳನ್ನು ಇ-ಮೇಲ್ ಮೂಲಕ ಸಹ ಕಳುಹಿಸಬಹುದಾಗಿದೆ: informationdiprawards@gmail.com ಅರ್ಜಿಗಳನ್ನು ಸ್ವಯಂವಾಗಿ ಇಲಾಖೆಯ ಕಚೇರಿಗೂ ಸಲ್ಲಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.